ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 11 ಸಾವಿರ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಅಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂತ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರು ನಗರದಲ್ಲಿ ಭದ್ರತೆಗಾಗಿ 11,830 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ನಗರದಾದ್ಯಂತ 7500 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಹಲವೆಡೆ ಸೆನ್ಸ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೊಬೈಕ್ ಕಮಾಂಡ್ ಹಾಗೂ ಅಂಟ್ರೋಲ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಐಲ್ಯಾಂಡ್ ಗಳನ್ನು ನಿರ್ಮಿಸಲಾಗಿದೆ. ಒಪೇರಾ ಜಂಕ್ಷನ್ ನಲ್ಲಿ ಪೊಲೀಸರು ಕಮಾಂಡ್ ವಾಹನ ನಿಲುಗಡೆ ಮಾಡಿದ್ದಾರೆ. ಪೊಲೀಸ್ ಕಂಟ್ರೋಲ್ ರೂಂ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಹೆಜ್ಜೆ ಹೆಜ್ಜೆಗೂ ಭದ್ರತೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.