ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಬೆನ್ನಲ್ಲೇ ನಟ ದರ್ಶನ್ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
ಹೌದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ನಟ ದರ್ಶನ್ ವಿರುದ್ಧ ಈಗಾಗಲೇ ಮೂರು ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣ ಸಂಬಂಧ ದರ್ಶನ್ ವಿಚಾರಣೆ ನಡೆಸಲು ಬೆಂಗಳೂರಿನ ಪೊಲೀಸರು ಬಳ್ಳಾರಿ ಜೈಲಿಗೆ ಆಗಮಿಸಲಿದ್ದಾರೆ.
ರೌಡಿ ಶೀಟರ್ ಗಳ ಜೊತೆಗೆ ನಟ ದರ್ಶನ್ ಅವರ ಫೋಟೋ ವೈರಲ್ ಆಗಿತ್ತು ಈ ಹಿನ್ನೆಲೆಯಲ್ಲಿ ಆ ಫೋಟೋಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಹೀಗಾಗಿ ದರ್ಶನ್ ವಿಚಾರಣೆಗಾಗಿ 24 ದಿನಗಳ ಅನುಮತಿ ಕೋರಲಾಗಿದ್ದು, ಇಂದು ಅಥವಾ ನಾಳೆ ಬೆಂಗಳೂರಿನಿಂದ ಪೊಲೀಸರು ಬಳ್ಳಾರಿಗೆ ಆಗಮಿಸಲಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣೆ ನಡೆಸಿದ ಬಳಿಕ ರೌಡಿ ಶೀಟರ್ ನಾಗನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.