ಬೆಂಗಳೂರು : ʼಬೆಂಗಳೂರು ಕೌಶಲ್ಯ ಶೃಂಗಸಭೆʼಯನ್ನು ಇದೇ ನವೆಂಬರ್ 5 ಮತ್ತು 6 ರಂದು ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು,ಯುವಶಕ್ತಿಯ ಭವಿಷ್ಯವನ್ನು ಇನ್ನಷ್ಟು ಬಲಪಡಿಸಲು, ಕೌಶಲ್ಯಗಳನ್ನು ಜಗತ್ತಿಗೆ ತಕ್ಕಂತೆ ವಿಸ್ತರಿಸಲು ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲು ನಮ್ಮ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ʼಬೆಂಗಳೂರು ಕೌಶಲ್ಯ ಶೃಂಗಸಭೆʼಯನ್ನು ಇದೇ ನವೆಂಬರ್ 5 ಮತ್ತು 6 ರಂದು ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಆಯೋಜಿಸಿದೆ.
ಬನ್ನಿ, ಭಾಗವಹಿಸಿ, ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಪ್ರವೇಶ ಉಚಿತವಾಗಿದ್ದು, ನೋಂದಣಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ. konfhub.com/checkout/bengaluru-skill-summit-2025?ticketId=56659…
https://twitter.com/CMofKarnataka/status/1985224515195142434








