ಬೆಂಗಳೂರು : ಮುಂದಿನ ತಿಂಗಳು ಏಪ್ರಿಲ್ 4 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಇತಿಹಾಸ ಪ್ರಸಿದ್ಧ ಕರಗ ಮಹೋತ್ಸವ ಆಯೋಜನೆ ಮಾಡಲಾಗಿದ್ದು, ಅಲ್ಲಿಯವರೆಗೆ ಹಾಲಿ ಧರ್ಮರಾಯ ಸ್ವಾಮಿ ದೇವಸ್ಥಾನದ ನಿರ್ವಹಣಾ ಸಮಿತಿಯನ್ನು ಮುಂದುವರಿಯಲು ಹೈಕೋರ್ಟ್ ಅನುಮತಿ ನೀಡಿದೆ.
ಹಾಲಿ ಸಮಿತಿಯನ್ನು ಮುಂದುವರಿಸುವಂತೆ ಕೋರಿ ಧರ್ಮರಾಯ ಸ್ವಾಮಿ ದೇವಸ್ಥಾನ ನಿರ್ವಹಣಾ ಸಮಿತಿಯ ಕೆ.ಸತೀಶ್ ಅರ್ಜಿ ಸಲ್ಲಿಸಿದ್ದರು.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಾಲಿ ಸಮಿತಿಯ ಅವಧಿ ಮಾರ್ಚ್ 21ಕ್ಕೆ ಮುಗಿಯಲಿದೆ. ಆದರೆ, ಕರಗ ಸಿದ್ಧತೆ ಮೂರು ತಿಂಗಳ ಹಿಂದೆಯೇ ಆರಂಭವಾಗಿದೆ. ಹೀಗಾಗಿ, ಕರಗ ಮಹೋತ್ಸವ ಮುಗಿಯುವವರೆಗೆ ಹಾಲಿ ಸಮಿತಿಯನ್ನೇ ಮುಂದುವರಿಸಬೇಕು ಎಂದು ಕೋರಿದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಹಾಲಿ ಸಮಿತಿಯು ಕರಗ ಮಹೋತ್ಸವ ಮುಗಿಯವವರೆಗೆ ಅಂದರೆ ಏಪ್ರಿಲ್ 15ರವರೆಗೆ ಅಸ್ತಿತ್ವದಲ್ಲಿರಲಿದೆ ಎಂದು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.