ಬೆಂಗಳೂರು : ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ಅವಕಾಶ ಇದ್ದು, ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ.
ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರ ಇಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಡ್ಡಿ ಮತ್ತು ದಂಡಕ್ಕೆ ವಿನಾಯಿತಿ ನೀಡಲಾಗಿರುವ ಒಟಿಎಸ್ ಯೋಜನೆಯನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಡಿಸೆಂಬರ್ 1 ರಿಂದ ಸುಮಾರು ಎರಡು ಪಟ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ ಸುಮಾರು 2.4 ಲಕ್ಷ ಸುಸ್ತಿದಾರರ ಪ್ರಕರಣಗಳು ಪಾವತಿಸುವುದು ಬಾಕಿಯಿರುತ್ತದೆ.ಆದ್ದರಿಂದ OTS ಯೋಜನೆಯಡಿ ತಕ್ಷಣವೇ ಬಾಕಿ ಆಸ್ತಿ ತೆರಿಗೆ ಪಾವತಿಸುವ ಸಲುವಾಗಿ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಯೋಜಿಸಿದೆ ಮತ್ತು ಅಭಿಯಾನವನ್ನು ಪ್ರಾರಂಭಿಸುತ್ತಿದೆ.