ಬೆಂಗಳೂರು : ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ಶಾಕ್ ನೀಡಿದ್ದು, ಸತತ ಮೂರು ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಬೆಸ್ಕಾಂ ಗ್ರಾಹಕರು ವಿದ್ಯುತ್ ಬಿಲ್ ಪಾವತಿಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ತಿಂಗಳುಗಟ್ಟಲೇ ಬಿಲ್ ಪಾವತಿಸದೆ, ಮುಂದೂಡುತ್ತಾ ವಿದ್ಯುತ್ ಸಂಪರ್ಕ ಕಡಿತಗೊಂಡ ನಂತರ ಬಿಲ್ ಪಾವತಿಸುವ ವಾಡಿಕೆಯನ್ನು ಕೆಲವರು ರೂಢಿಸಿಕೊಂಡು ಬಂದಿದ್ದಾರೆ. ಆದರೆ ಇನ್ಮುಂದೆ ಬಿಲ್ ಕಟ್ಟದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : 15 ಸಾವಿರ ಶಿಕ್ಷಕರ ನೇಮಕಾತಿ : ಈ ವಾರ 1:1 `ತಾತ್ಕಾಲಿಕ ಆಯ್ಕೆ ಪಟ್ಟಿ’ ಬಿಡುಗಡೆ
ಬೆಸ್ಕಾಂ ಗ್ರಾಹಕರು ಸತತ ಮೂರು ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಲು ಬೆಸ್ಕಾಂ ಕ್ರಮ ಕೈಗೊಳ್ಳುತ್ತದೆ. ಒಪ್ಪಂದ ರದ್ದತಿಯ ನಂತರ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರು ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮಹಾಂತೇಶ್ ಬೀಳಗಿ ಹೇಳಿದ್ದಾರೆ.