ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಮಂಗಳವಾರದಿಂದ ನಡೆಯಲಿದೆ. ಈ ಸರಣಿಗೂ ಮುನ್ನವೇ ಟೀಮ್ ಇಂಡಿಯಾ ದೊಡ್ಡ ಶಾಕ್ ಸಿಕ್ಕಿದೆ. ವಿರಾಟ್ ಕೊಹ್ಲಿ ಸ್ನಾಯು ಸೆಳೆತದಿಂದಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದಾಗ್ಯೂ, ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ 20 ಪಂದ್ಯದ ವೇಳೆ ಕೊಹ್ಲಿಗೆ ಬೆನ್ನುನೋವು ಕಾಣಿಸಿಕೊಂಡಿತ್ತು.
ಮಾಧ್ಯಮ ವರದಿಗಳ ಪ್ರಕಾರ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಪಂದ್ಯಕ್ಕೂ ಮುನ್ನ ಕೊಹ್ಲಿ ಸೋಮವಾರ ಅಭ್ಯಾಸಕ್ಕೆ ಹಾಜರಾಗಿರಲಿಲ್ಲ ಎನ್ನಲಾಗಿದೆ. ಸೋಮವಾರ, ಏಕದಿನ ಪಂದ್ಯಗಳಿಗೆ ಆಯ್ಕೆಯಾದ ಆಟಗಾರರಾದ ಶಿಖರ್ ಧವನ್, ಶಾರ್ದೂಲ್ ಠಾಕೂರ್ ಮತ್ತು ಪ್ರಸಿದ್ಧ್ ಕೃಷ್ಣ ಮಾತ್ರ ಲಂಡನ್ನ ಓವಲ್ ಮೈದಾನದಲ್ಲಿ ನೆಟ್ ಸೆಷನ್ ತೆಗೆದುಕೊಂಡರು ಎನ್ನಲಾಗಿದೆ.