ಬೆಂಗಳೂರು: ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುವುದು.
ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿರುತ್ತಾರೆ ಎಂದು ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.