ಬೆಂಗಳೂರು : ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪುತ್ರ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿ ಬಿಗ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು ಮಂಡ್ಯಕೆ ಮತ್ತೆ ಎಂಟ್ರಿ ಕೊಡಲು ನಿಖಿಲ್ ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದು, ಮಂಡ್ಯದಲ್ಲಿಯೇ ಮನೆ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದ ಮೇಲೆ ನಿಖಿಲ್ ಕುಮಾರಸ್ವಾಮಿ, ಕಣ್ಣಿಟ್ಟಿದು ರಾಮನಗರಕ್ಕಿಂತ ಮಂಡ್ಯವೇ ಸುಲಭ ಎಂದು ಜೆಡಿಎಸ್ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಬರಲು ತಯಾರಿ ಮಾಡಿಕೊಂಡಿದ್ದಾರೆ.ಸದ್ಯ ಮಂಡ್ಯದಲ್ಲಿ ಮನೆ ಹುಡುಕಲು ಬೆಂಬಲಿಗರಿಗೆ ಸೂಚಿಸಿದ್ದಾರೆ. ವಾರಕೊಮ್ಮೆ ಮಂಡ್ಯದಲ್ಲಿ ಉಳಿಯಲು ನಿಖಿಲ್ ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ.
ಈ ಹಿಂದೆ ವಾರಕ್ಕೊಮ್ಮೆ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದ್ದರು ಆದರೆ ಅಪರೂಪಕೊಮ್ಮೆ ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಕೇಂದ್ರ ಸಚಿವ ಜವಾಬ್ದಾರಿ ಅನಾರೋಗ್ಯದಿಂದ ಅಪರೂಪಕ್ಕೆ ಒಮ್ಮೆ ಭೇಟಿ ನೀಡುತ್ತಿದ್ದಾರೆ.ಈಗ ಮಗನ ಮೂಲಕ ಜಿಲ್ಲೆಯ ಮೇಲೆ ಹಿಡಿತ ಸಾಧಿಸಲು ಎಚ್ ಡಿ ಕುಮಾರಸ್ವಾಮಿ ಚಿಂತನೆ ನಡೆಸುತ್ತಿದ್ದಾರೆ. ಚುನಾವಣೆ ಭವಿಷ್ಯ ಕಟ್ಟಿಕೊಡಲು ಪ್ಲಾನ್ ಮಾಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.








