ಬೆಂಗಳೂರು : ಹೈಕೋರ್ಟ್ ನಲ್ಲಿ ಮುಡಾ ಪ್ರಕರಣದ ವಿಚಾರಣೆ ಬಾಕಿ ಇದೆ. ಇದರ ನಡುವೆ ಲೋಕಾಯುಕ್ತ ಪೊಲೀಸರು ಮಧ್ಯಂತರ ವರದಿಯಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇಂದು ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಸ್ವತಹ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಆರೋಪಿಸಿದ್ದೂ, ಮುಡಾ ಕೇಸ್ ಸಂಬಂಧ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ-ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ವರದಿಯನ್ನು ನ್ಯಾಯಾಲಯದಲ್ಲಿ ನೀವು ಪ್ರಶ್ನಿಸಬಹುದು ಅಂತನೂ ತಿಳಿಸಿದ್ದಾರೆ ಎಂಬುದಾಗಿ ಹೇಳಿದರು.
ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದ ಬಿ-ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ತಮಗೆ ನೋಟಿಸ್ ಕೂಡ ನೀಡಿದ್ದಾರೆ. ಆದರೇ ತನಿಖೆ ಇನ್ನೂ ಬಾಕಿ ಇದೆ. ಹೀಗಿರುವಾಗಲೇ ಮಧ್ಯಂತರ ವರದಿ ಸಲ್ಲಿಸುತ್ತಿದ್ದಾರೆ ಎಂಬುದಾಗಿ ತಿಳಿಸಿದರು.
ತನಿಖೆ ಇನ್ನೂ ಬಾಕಿ ಇರುವಾಗಲೇ ಮಧ್ಯಂತರ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿರುವಂತ ಲೋಕಾಯುಕ್ತ ಪೊಲೀಸರಿಗೆ ನಾಚಿಕೆ ಆಗಬೇಕು ಎಂಬುದಾಗಿಯೂ ಕಿಡಿಕಾರಿದರು.