ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.
ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಇದಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಿಸಿದೆ.
ರಾಜ್ಯ ಸರ್ಕಾರ ಮಧ್ಯಂತರ ಆದೇಶ ಚಾಲ್ತಿಯಲ್ಲಿರಿಸಿ ಏಕಸದಸ್ಯ ನ್ಯಾಯಪೀಠವೇ ಪ್ರಕರಣ ನಿರ್ಧರಿಸಬಹುದು ಎನ್ನುವ ಅಡ್ವೊಕೇಟ್ ಜನರಲ್ ಸಲಹೆ ಬಗ್ಗೆ ಪರಿಶೀಲಿಸಬೇಕೆಂದು ಮೇಲ್ಮನವಿದಾರರ ಪರ ವಕೀಲ ಆದಿತ್ಯ ಸೋಂಧಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಡ್ವೊಕೇಟ್ ಕೆ. ಶಶಿಕಿರಣ್ ಶೆಟ್ಟಿ ಅವರು, ಏಕ ಸದಸ್ಯ ನ್ಯಾಯ ಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಈಗಾಗಲೇ ಚಾಲ್ತಿಯಲ್ಲಿರುವ ಮಧ್ಯಂತರ ಆದೇಶ ಮುಂದುವರೆಯಲಿದೆ. ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿದೆ.