ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ನಿರ್ಮಾಪಕರ ವಿರುದ್ಧ ಹಾಕಲಾಗಿದ್ದ ಎಫ್ ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಟಾಕ್ಸಿಕ್ ಚಿತ್ರತಂಡವು ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಮಾನ್ ಸ್ಟರ್ ಮೈಂಡ್ಸ್ ವಿರುದ್ಧ ಅರಣ್ಯ ಇಲಾಖೆ ದೂರು ನೀಡಿತ್ತು.
ತಮ್ಮ ವಿರುದ್ಧ ದಾಖಲಾದ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ನಿರ್ಮಾಣ ಸಂಸ್ಥೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಎಫ್ ಐಆರ್ ಗೆ ತಡೆ ನೀಡಿದೆ.