ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಅನ್ನಭಾಗ್ಯ’ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 170 ರೂ. ಕೊಡುತ್ತಿದೆ. ಆದರೀಗ ಈ ಯೋಜನೆಯನ್ನ ನಕಲಿ ಫಲಾನುಭವಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದೀಗ ನಕಲಿ ಫಲಾನುಭವಿಗಳಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ.
ಹೌದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಅನ್ನಭಾಗ್ಯ’ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 170 ರೂ. ಕೊಡುತ್ತಿದೆ.ಆದರೆ ಈ ಯೋಜನೆಯ ಅಡಿಯಲ್ಲಿ ನಕಲಿ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಇದರ ದುರುಪಯೋಗ ಪಡೆದುಕೊಳ್ಳುವ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇದೀಗ ಇಲಾಖೆ ಮಟ್ಟದಲ್ಲೇ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದೆಲ್ಲಕ್ಕಿಂತ ಮುಖ್ಯವಾಗಿ ನಕಲಿ ಬಿಪಿಎಲ್ ಕಾರ್ಡ್ ಗಳನ್ನ ಪತ್ತೆ ಮಾಡಿ ಎಪಿಎಲ್ ಕಾರ್ಡ್ಗೆ ವರ್ಗಾಯಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ಇಲಾಖಾ ಮಟ್ಟದಲ್ಲೇ ಸಮಿತಿ ರಚನೆಗೆ ಚಿಂತನೆ ನಡೆಸಲಾಗುತ್ತಿದೆ. ಕಮಿಟಿ ನಕಲಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನ ಪರಿಶೀಲನೆ ನಡೆಸಿ, ಅವರನ್ನ ಎಪಿಎಲ್ ಕಾರ್ಡ್ ಗೆ ಸೇರಿಸುವ ಬಗ್ಗೆ ಚರ್ಚಿಸಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಲು ಕೆಲವು ಅರ್ಹತೆಗಳು ಬೇಕಾಗಿದೆ. ಆರ್ಹತೆ ಹಾಗೂ ಮಾನದಂಡವನ್ನ ಆಧರಿಸಿ ಎಪಿಎಲ್ ಹಾಗೂ ಬಿಪಿಎಲ್ ಎಂದು ಗುರುತಿಸಲಾಗುತ್ತದೆ.
ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಣದ ಬದಲಿಗೆ ಆಹಾರ ಅಂದರೆ ಎಣ್ಣೆ, ಬೇಳೆಯನ್ನೊಳ್ಳಗೊಂಡ ಫುಡ್ ಕಿಟ್ ನೀಡುವ ಬಗ್ಗೆ ವಿಸ್ತೃತ ಚರ್ಚೆ ನಡೆದಿತ್ತು. ಸದ್ಯ ನಕಲಿ ಬಿಪಿಎಲ್ ಕಾರ್ಡ್ಗಳನ್ನ ತಡೆದು ನಂತರ ಆಹಾರ ಕಿಟ್ ವಿತರಣೆ ಸಂಬಂಧ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 13 ಲಕ್ಷ ಜನರ ಬಳಿ ನಕಲಿ ಬಿಪಿಎಲ್ ಕಾರ್ಡ್ಗಳಿವೆ ಶೇ.80 ರಷ್ಟು ಜನರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಾರೆ. ಈಗಾಗಲೇ ನೀತಿ ಆಯೋಗವೂ ಸಹ ತೀವ್ರ ಆಕ್ಷೇಪವನ್ನ ವ್ಯಕ್ತಪಡಿಸಿದೆ.