ಬೆಂಗಳೂರು : ಹೈಕೋರ್ಟ್ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.
ಹೌದು, ಮಂಗಳವಾರ ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ.
ವೇತನ ಹೆಚ್ಚಳ ಹಿಂಬಾಕಿ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೆಎಸ್ಸಾರ್ಟಿಸಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸೋಮವಾರ ಹೈಕೋರ್ಟ್ ನೌಕರರಿಗೆ ಸೂಚಿಸಿತ್ತು.
ನೌಕರರರು ಮುಷ್ಕರದಲ್ಲಿ ಭಾಗವಹಿಸಿದ್ದು, ಅಂತಹವರ ವಿರುದ್ದ ಸಂಸ್ಥೆ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ಸರ್ಕಾರ ಮುಷ್ಕರದಲ್ಲಿ ಭಾಗಿಯಾದ ಎಲ್ಲರಿಗೂ ಶಿಸ್ತುಕ್ರಮದ ನೊಟೀಸ್ ಜಾರಿ ಮಾಡಿದ್ದು, 30000 ಸಾರಿಗೆ ಸಿಬ್ಬಂದಿಗಳ 1 ದಿನದ ಸಂಬಳ ಕಟ್ ಮಾಡಿದೆ.