ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಗೃಹ ಇಲಾಖೆ ಇದಕ್ಕೆ ಅನುಮತಿ ನೀಡಿದೆ ಎನ್ನಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಈ ಜಾಮೀನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.
ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ ಗೃಹ ಇಲಾಖೆ ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.