ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.
ಹೌದು ಕಲ್ಬುರ್ಗಿ ಜಿಲ್ಲೆಯ ಆಫ್ಜಲಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಾಜೀತ ಅಭ್ಯರ್ಥಿಯಾದ ಮಾಲಿಕಯ್ಯ ಗುತ್ತೇದಾರ್ ಅವರು ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ನಾಳೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ಐಟಿ ಬಿಟಿ ಸಚಿವರಾದಂತಹ ಪ್ರಿಯಾಂಕರಿಗೆ ಅವರು ಕಲಬುರ್ಗಿಯಿಂದ ಬೆಂಗಳೂರಿಗೆ ಇಂದು ಪ್ರಯಾಣ ಬೆಳೆಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ. ವೈ ಪಾಟೀಲ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಮಾಲಿಕಯ್ಯ ಗುತ್ತೇದಾರ್ ಸೋತಿದ್ದರು.ಇತ್ತೀಚಿಗೆ ಅವರ ಸಹೋದರ ನಿತಿನ್ ಗುತ್ತೇದಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಹೀಗಾಗಿ ಇದೀಗ ಮಲ್ಲಿಗೆ ಗುತ್ತೇದಾರ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ.