ಬೆಂಗಳೂರು : ಆಹಾರ ಇಲಾಖೆಯು ರಾಜ್ಯಾದ್ಯಂತ ಬರೋಬ್ಬರಿ 7,76,206 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.
ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 4.50 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.
ರಾಜ್ಯಾದ್ಯಂತ ಆಹಾರ ಇಲಾಖೆ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ.
ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ. ಇದೊಂದೇ ಯೋಜನೆಯಿಂದ ತಿಂಗಳಿಗೆ ಸುಮಾರು 90 ಕೋಟಿ ಉಳಿತಾಯವಾಗುತ್ತದೆ. ಈ ಫಲಾನುಭವಿಗಳಿಗೆ ತಿಂಗಳಿಗೆ 72.50 ಲಕ್ಷ ಕ್ವಿಂಟಲ್ ಪಡಿತರ ವಿತರಿಸಲಾಗುತ್ತಿತ್ತು. ಇದಕ್ಕೆ ವೆಚ್ಚವಾಗುತ್ತಿದ್ದ ಅಂದಾಜು 22 ಕೋಟಿ ರೂಪಾಯಿ ಉಳಿತಾಯವಾಗಿದೆ.








