ಬೆಳಗಾವಿ : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹಧನ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಶೂನ್ಯ ವೇಳೆ ಜೆಡಿಎಸ್ ಸದಸ್ಯ ಮಂಚೇಗೌಡ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವ ವೆಂಕಟೇಶ್ ಅವರು, ನಮ್ಮ ಪ್ರಣಾಳಿಕೆಯಂತೆ ಹಾಲಿನ ಪ್ರೋತ್ಸಾಹಧನ ಹೆಚ್ಚಳ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಅದಕ್ಕೀನು ಸಮಯವಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಳ ಮಾಡಲಾಗುವುದು, ಆದರೆ ಸದ್ಯಕ್ಕೆ ಪ್ರೋತ್ಸಾಹಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನು 2023-24 ನೇ ಸಾಲಿನಲ್ಲಿ 1,300 ಕೋಟಿ ರೂ. ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ಈಗಾಗಲೇ 1,245 ಕೋಟಿ ರೂ. ಬಿಡುಗಡೆ ಆಗಿದೆ. ಉಳಿದ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.