ಬೆಂಗಳೂರು : ತೀವ್ರ ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ ರಣಬಿಸಿಲು ಜನರನ್ನು ಸುಡುತ್ತಿದೆ. ತಾಪಮಾನ 30 ಡಿಗ್ರಿ ಸೆ.ಮೀರಿದೆ.
ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಚಳಿಯಿಂದ ನಡುಗುತ್ತಿದ್ದ ಜನರು ಬಿಸಿಲಿನ ಶಾಖಕ್ಕೆ ಹೈರಾಣಾಗಿದ್ದಾರೆ. ಫೆಬ್ರವರಿ ತಿಂಗಳಿನಿಂದಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಈ ಬಾರಿ ಬೇಸಿಗೆಯಲ್ಲಿ ಇನ್ನೂ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರಗಿ 36.8, ಬಾಗಲಕೋಟೆ 34.8, ರಾಯಚೂರು 34.0. ವಿಜಯಪುರ 33.5, ಬೀದರ್ 33.4 ಸೆ.ಉಷ್ಣಾಂಶ ದಾಖಲಾಗಿದೆ. ಫೆಬ್ರವರಿ ತಿಂಗಳಲ್ಲಿ 25 ರಿಂದ 26 ಡಿಗ್ರೀ ಸೆ. ಉಷ್ಣಾಂಶ ದಾಖಲಾಗುತ್ತುತ್ತು. ಆದ್ರೆ ಈ ಬಾರಿ ಹಲವು ಜಿಲ್ಲೆಗಳಲ್ಲಿ 30 ಡಿ.ಸೆ ಗೂ ಮೀರಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಷ್ಣಾಂಶದಲ್ಲಿ ಏರಿಕೆಯಾಗಿದ್ದು, ಉತ್ತರ ಕರ್ನಾಟದಲ್ಲಿ ಈಗಾಗಲೇ 32-34 ಡಿಗ್ರಿ ತಾಪಮಾನ ದಾಖಲಾಗಿದೆ.
ಬೇಸಿಗೆಯಲ್ಲಿ ಈ ಮುನ್ನೆಚ್ಚರಿಕೆಗಳನ್ನು ಪಾಲಿಸಿ
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು.
ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು.
ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ, ಹಿರಿಯ ನಾಗರಿಕರು
ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯುವುದು. ಬೆಳ್ಳಿಗೆ 11 ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.
ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ಲಕೋಸ್/ಓ.ಆರ್.ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ.
ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ (Use window, shades, Fanning and cross Ventilation).
ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟಿಯನ್ನು ಹೊಂದಿರುವಂತೆ ನೋಡಿಕೊಂಡು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಪ್ಯಾಕ್ ಗಳ ಮಧ್ಯ ಇಡಬಹುದು.
ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.
ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ನಿಗದಿಪಡಿಸುವುದು. ಕಡ್ಡಾಯ ವಿರಾಮವನ್ನು/
ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು.
ಬೇಸಿಗೆ ದಿನಗಳಲ್ಲಿ ತಣ್ಣೀರಿ ಸ್ನಾನ ಒಳ್ಳೆಯದು.