ಬೆಂಗಳೂರು : ಮುಂದಿನ ವರ್ಷದಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ ರ್ಷದಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ 10 ನೇ ತರಗತಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ.ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ನೀಡಿದ್ದಾರೆ. ಎರಡನೇ ಮತ್ತು ಮೂರನೇ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.