ಬೆಂಗಳೂರು : ಬೆಂಗಳೂರು : ಈಗಾಗಲೇ ಸರಕಾರ ಕೆಎಸ್ಆರ್ಟಿಸಿ ಬಸ್ ಹಾಗು ಮೆಟ್ರೋ ಟಿಕೆಟ್ ಪ್ರಯಾಣದ ಅದರ ಏರಿಕೆ ಮಾಡಿ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆಯುವಂತೆ ಇದೀಗ ಮತ್ತೆ ದರ ಏರಿಕೆಯ ಶಾಕೆ ನೀಡುತ್ತಿದ್ದು, ನಂದಿನಿ ಹಾಲಿನ ದರ ಏರಿಕೆ ಸಂಬಂಧ ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು ಹೆಚ್ಚಾಗಿರುವುದರಿಂದ ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚಳ ಮಾಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಂದ ಕೆಎಂಎಫ್ ಅಧ್ಯಕ್ಷರು ಮತ್ತು ಪಶು ಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳದ ಪ್ರಸ್ತಾವನೆ ಸಿದ್ಧವಾಗಿದ್ದು, ಸರ್ಕಾರದ ಅನುಮತಿ ಬಾಕಿ ಇದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನೆ ಸಚಿವ ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಗೂ ಹಿರಿಯ ಅಧಿಕಾರಿಗಳು, ಹಾಲು ಒಕ್ಕೂಟದ ಅಧ್ಯಕ್ಷರೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.