ಬೆಂಗಳೂರು : ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರನ್ನು ಕಾಯಂಗೊಳಿಸಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಈ ಕುರಿತು ವಿಧಾನಪರಿಷತ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ಮಂದಿ ವಾಟರ್ ಮ್ಯಾನ್ ಗಳಿದ್ದು, ಇವರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಟ ವೇತನ ನೀಡಲಾಗುತ್ತಿದೆ. ಅದೇ ರೀತಿ ಬಿಬಿಎಂಪಿ ಸೇರಿದಮತೆ ರಾಜ್ಯದಲ್ಲಿ 35 ಸಾವಿರ ಪೌರಕಾರ್ಮಿಕರಿದ್ದಾರೆ. ಸರ್ಕಾರಿ ನೌಕರರಂತೆಯೇ ಪರಿಗಣಿಸಲಾಗುತ್ತಿದೆ. ಸರ್ಕಾರದಿಂದ ವಿಶೇಷ ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.