ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಕೂಡಲೇ 50:50 ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್ ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಬಿಜೆಪಿ ಶಾಸಕ ಶ್ರೀವತ್ಸ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಧಿಕಾರದಲ್ಲಿ 50:50 ಅನುಪಾತದ ಸೈಟ್ ಹಿಂಪಡೆಯಲು ಕ್ರಮ ಕೈಗೊಳ್ಳಿ ಎಂದು ಸಿಎಂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಸೈಟ್ ಪಡೆದವರಿಗೆ ಇದೀಗ ಟೆನ್ಶನ್ ಶುರುವಾಗಿದೆ.