ಬೆಂಗಳೂರು : ನಕಲಿ ದಾಖಲೆಗಳನ್ನು ಸಲ್ಲಿಸಿ ಮಂಡಳಿಯ ಸೌಲಭ್ಯಗಳನ್ನು ಪಡೆದುಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅಂತಹ ಕಾರ್ಮಿಕರು ಕೂಡಲೇ ಮಂಡಳಿಗೆ ನಕಲಿ ಕಾರ್ಮಿಕ ಕಾರ್ಡನ್ನು ಹಿಂದಿರುಗಿಸುವಂತೆ ಸೂಚನೆ ನೀಡಲಾಗಿದೆ.
ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆಗಳನ್ನು ಸಲ್ಲಿಸಿ, ಕಾರ್ಮಿಕ ಕಾರ್ಡ್ ಗಳನ್ನು ಪಡೆದುಕೊಂಡು ಮಂಡಳಿಯು ನೀಡುವ ಸೌಲಭ್ಯಗಳ ಲಾಭ ಪಡೆಯುತ್ತಿದ್ದರೆ ಸರ್ಕಾರವು ಕಠಿಣ ಕಾನುನು ಕ್ರಮ ಜರುಗಿಸಲಿದೆ.
ನಿಮ್ಮ ಬಳಿ ಈ ಕಾರ್ಮಿಕ ಕಾರ್ಡ್ ಇದ್ದರೆ ಕೂಡಲೇ ಕಾರ್ಮಿಕ ಇಲಾಖೆಗೆ ತೆರಳಿ ನಕಲಿ ಕಾರ್ಮಿಕ ಕಾರ್ಡನ್ನು ಹಿಂದಿರುಗಿಸಿ. ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆಗಳನ್ನು ಸಲ್ಲಿಸಿ, ಕಾರ್ಮಿಕ ಕಾರ್ಡ್ ಗಳನ್ನು ಪಡೆದು ಸೌಲಭ್ಯ ಪಡೆಯುತ್ತಿರುವವರು ನಕಲಿ ಕಾರ್ಡ್ ಹಿಂದಿರುಗಿಸದಿದ್ದಲ್ಲಿ ಅಂತವರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.