ನವದೆಹಲಿ : ಬೆನ್ನು ನೋವಿನ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿರುವ ಕೊಲೆ ಆರೋಪಿ ನಟ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಡಿಸೆಂಬರ್ 6 ಅಥವಾ 9 ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿ ಬೆನ್ನುನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆಗಾಗಿ ಜಾಮೀನು ನೀಡುವಂತೆ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ 6 ವಾರ ಷರತ್ತುಬದ್ದ ಜಾಮೀನು ನೀಡಿತ್ತು ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದುವರೆಗೂ ಶಸ್ತ್ರಚಿಕಿತ್ಸೆ ಪಡೆದಿಲ್ಲ. ಹೀಗಾಗಿ ಕರ್ನಾಟಕ ಸರ್ಕಾರ ಪ್ರಾಸಿಕ್ಯೂಷನ್ ಪರ ವಕ ಪರ ವಕೀಲರು ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.