ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಮತ್ತೊಂದು ಶಾಕ್ ನೀಡಿದೆ. ರಾಜ್ಯದಲ್ಲಿ ಈ ವಾರ ಬಿಸಿಲಿನ ಝಳ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ತಾಪಮಾನದಿಂದ ಜನರು ಹೈರಾಣಾಗಿದ್ದಾರೆ. ಫೆಬ್ರವರಿಯಲ್ಲೇ ಕೆಲವು ಜಿಲ್ಲೆಗಳಲ್ಲಿ 30-35 ಡಿಗ್ರೀ ಸೆ.ತಾಪಮಾನ ದಾಖಲಾಗುತ್ತಿದೆ. ಬಾಗಲಕೋಟೆ , ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಹಾವೇರಿ. ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಹವಾಮಾನ ಬದಲಾವಣೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ. ಬಳ್ಳಾರಿ. ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು. ದಾವಣಗೆರೆ, ಹಾಸನ, ಕೊಡಗು, ಕೋಲಾರ. ಮಂಡ್ಯ. ಮೈಸೂರು, ಶಿವಮೊಗ್ಗದಲ್ಲಿ ಕೂಡ ಬಿಸಿಲಿನ ಝಳ ಹೆಚ್ಚಾಗಲಿದೆ.
ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:
ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12:00 ರಿಂದ 3.00 ರವರೆಗೆ).
(heat wave) ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.
ಕಾಲಕಾಲಕ್ಕೆ, ಸಾಕಷ್ಟು ನೀರು ಕುಡಿಯುವುದು.
ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟಗಳನ್ನು ಧರಿಸುವುದು.
ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.
ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).
ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.
ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.
ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು.
ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.
ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು. ಹಾಗೂ ಆಗ್ತಿಂದಾಗ ತಣ್ಣೀರು ಸ್ನಾನ ಮಾಡುವುದು.
ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ನವರ್, ಹ್ಯಾಂಡ್ನವೆಲ್, ಹ್ಯಾಂಡ್ಯಾನ್, ಎಲೆಕ್ಟೋಲೈಟ್ / ಗ್ಲೋಕೋಸ್ / ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು (heat wave) ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.