ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಈಗಾಗಲೇ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತುಕಾರಾಮ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. 8,881 ಮತಗಳ ಅಂತರದಿಂದ ಅನ್ನಪೂರ್ಣ ಅವರು ಮುನ್ನಡೆ ಸಾಧಿಸಿದ್ದಾರೆ.
ಆದರೆ ಇನ್ನು ಉಳಿದ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದರು.
ಇದೀಗ ಈ ಎರಡು ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿಗೆ ಭಾರಿ ಹಿನ್ನಡೆಯಾಗಿದೆ. ಹೌದು ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ್ ಅವರಿಗೆ 70,306 ಮತಗಳಿಂದ ಮುನ್ನಡೆ ಸಾಧಿಸಿದ್ದರೆ, ಇನ್ನು ಬಿಜೆಪಿಯ ಭರತ್ ಬೊಮ್ಮಾಯಿ 65,784 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಕೂಡ ಭಾರೀ ಮುನ್ನಡೆ ಸಾಧಿಸಿದ್ದು, ಎನ್ ಡಿ ಅಭ್ಯರ್ಥಿ ನಿಖಿಲ್ ಗೆ ತೀವ್ರ ಮುಖಭಂಗ ಎದುರಾಗಿದೆ. ಸಿಪಿ ಯೋಗೇಶ್ವರ್ ಅವರ 29,967 ಮತಗಳಿಂದ ಮುನ್ನಡೆ ಸಾಧಿಸಿದ್ದು, ಯೋಗೇಶ್ವರ್ ಗೆ 67,967 ಮತಗಳು ಪಡೆದುಕೊಂಡಿದದ್ದು, 46,001 ಮತಗಳನ್ನು ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.