ಬೆಳಗಾವಿ : ಇಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ SDA ನೌಕರ ರುದ್ರಣ್ಣ ಯಡವಣ್ಣನವರ ಎನ್ನುವವರು ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಆತ್ಮಹತ್ಯೆಗೆ ಮುನ್ನ ಬರೆದ ತೋಟದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಹೆಸರು ಉಲ್ಲೇಖಿಸಿದ್ದಾರೆ.
ಹೌದು, ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಫ್‌ಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್‌ನಲ್ಲಿ ಘಟನೆ ನಡೆದಿದೆ. ತಹಶಿಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಗ್ರೂಪ್‌ಲ್ಲಿ ಸಂದೇಶ ರವಾನಿಸಿದ್ದ ರುದ್ರಣ್ಣ. ಬೆಳಗಾವಿ ತಹಶಿಲ್ದಾರ್ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪಲ್ಲಿ ಸಂದೇಶ ರವಾನೆ. ನಾನು ಆತ್ಮಹತ್ಯೆಗೆ ಶರಣಾಗುವುದಾಗಿ ಗ್ರೂಪ್‌ನಲ್ಲಿ ಮೆಸೆಜ್ ಮಾಡಿದ್ದರು. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸಚಿವರ ಆಪ್ತ ಸಹಾಯಕ ಸೋಮು ಅವರೇ ಕಾರಣ. ಇನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟ ಸೋಮು ದೊಡದವಾದ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಆಗಿದ್ದಾರೆ.
ನಮ್ಮ ತಹಶಿಲ್ದಾರ್ ಕಚೇರಿಯಲ್ಲಿ ತುಂಬಾ ಅನ್ಯಾಯ ನಡೆಯುತ್ತಿದೆ. ಎಲ್ಲರೂ ಒಟ್ಟಾಗಿ ಹೋರಾಡಿ ಎಂದು ಮೆಸೇಜ್ ಮೂಲಕ ಮನವಿ ಮಾಡಿದ್ದು, ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ನಿನ್ನೆ ಅವರಿಗೆ ಸೌದತ್ತಿಗೆ ವರ್ಗಾವಣೆಯಾಗಿತ್ತು ವರ್ಗಾವಣೆ ಕುರಿತಾಗಿ ಕೂಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.