ಮೈಸೂರು: ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಸೇರಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.
ಹೌದು, ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಾದಲ್ಲಿ ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಜಿ.ಟಿ ಹಾಗೂ ನಟೇಶ್ ವಿರುದ್ಧ ದೂರು ನೀಡಲಾಗಿದೆ.
ಬಿಜೆಪಿ ಶಾಸಕ ಶ್ರೀವತ್ಸ ಅವರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಡಾ ಆಯುಕ್ತ ನಟೇಶ್ ಹಾಗೂ ದಿನೇಶ್ ಕುಮಾರ್ ಜಿ.ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಇಬ್ಬರು ಅಧಿಕಾರಿಗಳು ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದರು. ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಎಂದು ತಿಳಿಸಿದ್ದಾರೆ.
ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿತು.