ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇದೀಗ ಮತ್ತೊಂದು ಸಾಕ್ಷಿ ಕೊಟ್ಟಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಉದಾಹರಣೆ ನೀಡಿ ಆರೋಪಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಬೀರಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ ಬೀರಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಕೊಡುತ್ತಿದ್ದೇನೆ ! ಕ್ರಯಪತ್ರ ನೊಂದಣಿ ಮಾಡಿಸಿಕೊಳ್ಳುವವರು ನೊಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ರವರು ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿರವರ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಸೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ ! ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕ ? ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರಿಸುವರೆ? ಎಂದು ಪ್ರಶ್ನಿಸಿದ್ದಾರೆ.