ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಅದರ ಬೆನ್ನಲ್ಲೆ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಸಹ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ.
ಹೌದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸದ್ಯ ಶಾಸಕ ಭೈರತಿ ಬಸವರಾಜ್ ತಲೆಮೆಡಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ನಿನ್ನೆ ಹೈಕೋರ್ಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿತ್ತು ಬಳಿಕ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.
ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಶಾಸಕ ಭರತಿ ಬಸವರಾಜ್ ದುಬೈನಲ್ಲಿ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಸುಪ್ರೀಂ ಕೋರ್ಟಲ್ಲು ನಿರೀಕ್ಷಣ ಜಾಮೀನು ಅರ್ಜಿ ವಜಾ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಶರಣ ಗತಿ ಆಗುವ ಸಾಧ್ಯತೆ ಇದೆ ಹಾಗಾಗಿ ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನ ಸಿಐಡಿ ಕಚೇರಿ ಬಳಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.








