Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆದಾಯ ಸಮಾನತೆಯಲ್ಲಿ ಭಾರತ ಅಗ್ರಸ್ಥಾನ: ವಿಶ್ವಬ್ಯಾಂಕ್ ವರದಿ | Income Equality

06/07/2025 8:36 AM

BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ

06/07/2025 8:35 AM

ನ್ಯಾಯಮೂರ್ತಿ ವರ್ಮಾ ಕುರಿತ ಸುಪ್ರೀಂ ಕೋರ್ಟ್ ಆಂತರಿಕ ವರದಿಗೆ ಸಾಂವಿಧಾನಿಕ ಪ್ರಸ್ತುತತೆ ಇಲ್ಲ: ಕಪಿಲ್ ಸಿಬಲ್

06/07/2025 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ
KARNATAKA

BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ

By kannadanewsnow5706/07/2025 8:35 AM

ಬೆಂಗಳೂರು : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ ಎಂದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು ಎಂದು ಹೇಳಿದ್ದಾರೆ.
ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ” ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದರು.

BIG NEWS: Bilingual formula is my opinion: CM Siddaramaiah
Share. Facebook Twitter LinkedIn WhatsApp Email

Related Posts

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

06/07/2025 8:12 AM1 Min Read

BIG NEWS : ರಾಜ್ಯದ ಮಹಿಳೆಯರ ಸುರಕ್ಷತೆಗೆ ಮಹತ್ವದ ಕ್ರಮ : ರಾಜ್ಯಾದ್ಯಂತ `ಅಕ್ಕ ಪಡೆ’ ವಿಸ್ತರಣೆ.!

06/07/2025 8:07 AM1 Min Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

06/07/2025 8:03 AM2 Mins Read
Recent News

ಆದಾಯ ಸಮಾನತೆಯಲ್ಲಿ ಭಾರತ ಅಗ್ರಸ್ಥಾನ: ವಿಶ್ವಬ್ಯಾಂಕ್ ವರದಿ | Income Equality

06/07/2025 8:36 AM

BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ

06/07/2025 8:35 AM

ನ್ಯಾಯಮೂರ್ತಿ ವರ್ಮಾ ಕುರಿತ ಸುಪ್ರೀಂ ಕೋರ್ಟ್ ಆಂತರಿಕ ವರದಿಗೆ ಸಾಂವಿಧಾನಿಕ ಪ್ರಸ್ತುತತೆ ಇಲ್ಲ: ಕಪಿಲ್ ಸಿಬಲ್

06/07/2025 8:12 AM

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

06/07/2025 8:12 AM
State News
KARNATAKA

BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ

By kannadanewsnow5706/07/2025 8:35 AM KARNATAKA 2 Mins Read

ಬೆಂಗಳೂರು : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು…

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನ ಮೇ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

06/07/2025 8:12 AM

BIG NEWS : ರಾಜ್ಯದ ಮಹಿಳೆಯರ ಸುರಕ್ಷತೆಗೆ ಮಹತ್ವದ ಕ್ರಮ : ರಾಜ್ಯಾದ್ಯಂತ `ಅಕ್ಕ ಪಡೆ’ ವಿಸ್ತರಣೆ.!

06/07/2025 8:07 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

06/07/2025 8:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.