ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಿಜೆಪಿ ಪಾದಯಾತ್ರೆ ನಡೆಸಿತ್ತು. ಇದೀಗ ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಪಾದಯಾತ್ರೆ ಬಹುತೇಕ ಫಿಕ್ಸ್ ಅಂತ ಹೇಳಲಾಗುತ್ತಿದೆ ಈ ಬಾರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಳ್ಳಾರಿ ಪಾದಯಾತ್ರೆ, ಬಿಜೆಪಿ ಹಮ್ಮಿಕೊಂಡಿದೆ.
ಬಿಜೆಪಿ ನಾಯಕರ ಪಾದಯಾತ್ರೆಯ ಕಾರ್ಯಕ್ರಮ ಬಹುತೇಕ ಪಕ್ಕ ಎಂದು ಹೇಳಲಾಗುತ್ತಿದೆ ಬಳ್ಳಾರಿಯಲ್ಲಿ ಇಂದು ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ ನಡೆಯಲಿದೆ ರಿಪಬ್ಲಿಕ್ ಆಫ್ ಬಳ್ಳಾರಿ ಆರೋಪದ ಅಡಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ದರು. ಇಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧವೇ ರಿಪಬ್ಲಿಕ್ ಆಫ್ ಬಳ್ಳಾರಿ ಅಸ್ತ್ರ ಉಪಯೋಗಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.








