ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪುರಸಭೆ ಚುನಾವಣೆ ಫಲಿತಾಂಶದ ವೇಳೆ ಬಿಜೆಪಿ ಹಾಗು ಜೆಡಿಎಸ್ ಭಾರಿ ಹೈಡ್ರಾಮಾ ನಡೆದಿದ್ದು, ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಬಡಿದಾಟ ನಡೆದಿದೆ. ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಹೊಡೆದಾಟ ನಡೆದಿದೆ.ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆದರೆ ಈ ಒಂದು ಹೊಡೆದಾಟದ ನಡುವೆ ಜೆಡಿಎಸ್ ಪುರಸಭೆಯ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಹೌದು ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪುರಸಭೆ ಬಳಿ ಈ ಒಂದು ಘಟನೆ ನಡೆದಿದೆ. ಪೊಲೀಸರ ಎದುರೇ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜೇವರ್ಗಿ ಪುರಸಭೆ ಅಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಮಾಲಿಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಗಂಗೂಬಾಯ್ ಸತ್ಕಾರ್ ಆಯ್ಕೆಯಾಗಿದ್ದಾರೆ.
ಬಿಜೆಪಿಯ ಕೆಲವು ಸದಸ್ಯರು ಜೆಡಿಎಸ್ ಗೆ ಬೆಂಬಲ ನೀಡಿದ್ದಾರೆ. ಬಿಜೆಪಿ 17 ಸದಸ್ಯರು ಜೆಡಿಎಸ್ ಮತ್ತು ಕಾಂಗ್ರೆಸ್ನ ತಲಾ ಮೂರು ಸದಸ್ಯರಿದ್ದಾರೆ. ಕೊನೆಗಳಿಗೆಯಲ್ಲಿ ಬಿಜೆಪಿಯ ಸುಮಾರು ಏಳಕ್ಕೂ ಹೆಚ್ಚು ಸದಸ್ಯರಿಂದ ಜೆಡಿಎಸ್ಗೆ ಬೆಂಬಲ ಸೂಚಿಸಲಾಗಿದ್ದು, ಹೀಗಾಗಿ ಮೈತ್ರಿ ಮುರಿದು ಜೆಡಿಎಸ್ ಅಧಿಕಾರಕ್ಕೆ ಏರಿದೆ. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನೇತೃತ್ವದಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.