ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಇಂದು ಮಹತ್ವದ ದಿನವಾಗಿದೆ. ಏಕೆಂದರೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದ್ದು, ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರ ಆಗಲಿದೆ.
ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ , 2016ರ 15 ರಂದು ಧಾರವಾಡ ಜಿಮ್ ನಲ್ಲಿ ಯೋಗೇಶ್ ಕೂಡ ಕೊಲೆ ಆಗಿತ್ತು. 20 ಲಕ್ಷ ಸುಪಾರಿ ನೀಡಿ ಕೊಲೆ ಮಾಡಿರುವಂತಹ ಆರೋಪ ಕೇಳಿ ಬಂದಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂತಿಮ ತೀರ್ಪು ಪ್ರಕಟಿಸಲಿದೆ. ಹಾಗಾಗಿ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ ಆಗಲಿದೆ








