ಬೆಂಗಳೂರು:ರಾಜ್ಯ ಬಿಜೆಪಿ ವಿರುದ್ದ ಮಾದಿಗ ಸಮಾಜ ಸಿಡಿದೆದ್ದಿದೆ.ಮಾದಿಗ ಸಮಾಜಕ್ಕೆ ಬಿಜೆಪಿ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಪಟ್ಟಿಯಲ್ಲಿ ಅವಕಾಶ ನೀಡದಿರುವುದಕ್ಕೆ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತವಾಗಿದೆ.ರಾಜ್ಯ ಬಿಜೆಪಿಯ ವಿವಿಧ ಘಟಕಕ್ಕೆ ಪದಾಧಿಕಾರಿಗಳನ್ನು ವಿಜಯೇಂದ್ರ ನೇಮಕ ಮಾಡಿದ್ಧರು.ಆದರೆ ಮಾದಿಗ ಸಮಾಜಕ್ಕೆ ಪ್ರಾತಿನಿಧ್ಯ ಸಿಗಲಿಲ್ಲ ಎಂದು ಮುಖಂಡರು ಸಭೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದರು.
ಸಮಾಜದ ಮುಖಂಡರು ಸಭೆ ನಡೆಸಿ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು.ಒಂದು ವೇಳೆ ಪ್ರಾತಿನಿಧ್ಯ ನೀಡದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಅನುಭವಿಸಬೇಕಾಗುತ್ತದೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.