ವಿಜಯಪುರ : ಶೀಘ್ರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ ನೀಡಿದ್ದಾರೆ.
ಒಳ್ಳೆಯ ಅಧ್ಯಕ್ಷ ಆಗಬೇಕಾದರೆ ಚುನಾವಣೆ ಆಗಲಿ. ಬ್ಲಾಕ್, ತಾಲೂಕು & ಜಿಲ್ಲಾಧ್ಯಕ್ಷರ ಚುನಾವಣೆ ಪಾರದರ್ಶಕವಾಗಿರಲಿ. ನಮಗೆ ಓಟ್ ಹಾಕುವಂತೆ ಒತ್ತಾಯ ಹೇರುವಂತೆ ಇರಬಾರದು. ಇದಕ್ಕೆ ಅವಕಾಶ ನೀಡಬಾರದು ಎಂದು ಚೌಹಾಣ್ಗೆ ಮನವಿ ಮಾಡುತ್ತೇನೆ ಪ್ರತಿ ಜಿಲ್ಲೆಗೆ ಬೇರೆ ರಾಜ್ಯದ ಮುಖಂಡರನ್ನು ಉಸ್ತುವಾರಿಯನ್ನಾಗಿ ಮಾಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದರು.
ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ಪರ್ಧೆ ಮಾಡುವ ಅವಕಾಶವಿದೆ.ಸಾಮಾನ್ಯ ಕಾರ್ಯಕರ್ತರು ಕೂಡ ಸ್ಪರ್ಧೆ ಮಾಡಲಿ. ಚುನಾವಣೆಗೆ ನಾವು ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
ಇನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀವು ಸ್ಪರ್ಧಿಸುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಯಾರು ಸ್ಪರ್ಧೆ ಮಾಡುತ್ತಾರೋ ಗೊತ್ತಿಲ್ಲ. ಎಲ್ಲರೂ ಸೇರಿ ನಿರ್ಧಾರ ಮಾಡಿದವರು ಸ್ಪರ್ಧೆ ಮಾಡುತ್ತಾರೆ ಹೈಕಮಾಂಡ್ ಯಾರಿಗೂ ಮಣೆ ಹಾಕಿಲ್ಲ. ಈ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ತಟಸ್ಥವಾಗಿದೆ. ಅದಕ್ಕಾಗಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕಳಿಸಿದ್ದಾರೆ. ಇಲ್ಲದಿದ್ದರೆ ಅರುಣ್ ಸಿಂಗ್ ಅವರನ್ನು ಕಳುಹಿಸುತ್ತಿದ್ದರು ಎಂದರು.