ಬೆಳಗಾವಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ್ ಆಗಲಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಬಂದ್ ಆಗಲಿವೆ. ನಮ್ಮ ಗ್ಯಾರಂಟಿ ಏನು ಅಂತ ಶಾಸಕರು ತಕರಾರು ತೆಗೆದಿದ್ದಾರೆ. ನಮ್ಮ ತೆರಿಗೆ ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ರು, ಹತ್ತು ಸಾವಿರ ಕೋಟಿ ರೂ. ಹಿಂದುಳಿದ ವರ್ಗಕ್ಕೆ ಕೊಡ್ತೀನಿ ಅಂತ ಹೇಳಿದ್ರೂ, ಯಾರಪ್ಪಂದು ಕೊಡ್ತೀರಿ ಎಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಇನ್ನು ಯತ್ನಾಳ್ ಮತ್ತೊಮ್ಮೆ ಸಿಎಂ ಆಗುವ ಆಸೆ ಬಿಚ್ಚಿಟ್ಟಿದ್ದು, ನಾನು ಮುಖ್ಯಮಂತ್ರಿ ಆದ್ರೆ ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ ಮಾಡುತ್ತೇನೆ. ಈಗ ಸಿಎಂ ಸಿದ್ದರಾಮಯ್ಯ 2,000 ರೂ. ಕೊಡುತ್ತಿದ್ದಾರೆ. ನಾನು ಸಿಎಂ ಆದ್ರೆ 5,000 ರೂ. ಕೊಡ್ತೇನೆ ಎಂದು ಹೇಳಿದ್ದಾರೆ.

Share.
Exit mobile version