ಬೆಂಗಳೂರು : ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಇಂದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆಯಿಂದ ಬಿಜೆಪಿ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಅವರು ಆದೇಶಿಸಿದರು.
ಈ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಅಮಾನತುಗೊಂಡ ಶಾಸಕರನ್ನು ಸದನದ ಹೊರಗಡೆ ಎತ್ತಿಕೊಂಡು ಬಂದರು. ಸದನ ಮುಂದೂಡಲ್ಪಟ್ಟ ಕೂಡಲೇ ಬಿಜೆಪಿ ಸದಸ್ಯರು ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ರಾಜಭವನದ ಅಂಗಳಕ್ಕೆ ಶಾಸಕರ ಅಮಾನತು ವಿಚಾರ ತಲುಪಲಿದೆ. ಈ ಹಿನ್ನೆಲೆಯಲ್ಲಿ ರಾಜ ಭವನಕ್ಕೆ ಬಿಜೆಪಿ ಶಾಸಕರು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.