ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಂಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದ ನಾಯಕರಾದ ಆರ್.ಅಶೋಕ ಮಂಡ್ಯ, ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮತ್ತು ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ರೆ. ಡಿ.ವಿ.ಸದಾನಂದಗೌಡ ತುಮಕೂರಿನಲ್ಲಿ, ಬಸವರಾಜ ಬೊಮ್ಮಾಯಿ ದಾವಣಗೆರೆ, ಗೋವಿಂದ ಕಾರಜೋಳ ಚಿತ್ರದುರ್ಗ, , ಬಿ.ಶ್ರೀರಾಮುಲು ಬಳ್ಳಾರಿ, ಸಿ.ಟಿ.ರವಿ ಚಿಕ್ಕಮಗಳೂರು, ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.