Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಗೆ ಸ್ವೀಡನ್‌ನ ಅತ್ಯುನ್ನತ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್’ ಗೌರವ; ಇದು 31ನೇ ಜಾಗತಿಕ ಪ್ರಶಸ್ತಿ!

GOOD NEWS : ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಭಾರತದಲ್ಲಿ ಮೊದಲ ಬಾರಿಗೆ 7 ನಿಮಿಷಗಳಲ್ಲಿ `ಕ್ಯಾನ್ಸರ್’ ಗುಣಪಡಿಸುವ ಇಂಜೆಕ್ಷನ್ ಬಿಡುಗಡೆ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತದಲ್ಲಿ ಬಿಡುಗಡೆಯಾಯಿತು ಕೇವಲ ‘7 ನಿಮಿಷದ’ ಇಂಜೆಕ್ಷನ್ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಇಂದಿನಿಂದ ಬಿಜೆಪಿಯಿಂದ ‘ಅಹೋರಾತ್ರಿ ಧರಣಿ’
KARNATAKA

BIG NEWS : ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಇಂದಿನಿಂದ ಬಿಜೆಪಿಯಿಂದ ‘ಅಹೋರಾತ್ರಿ ಧರಣಿ’

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ನಿನ್ನೆಯಿಂದ ಹಾಲು ಸೇರಿ ವಿವಿಧ ಅಗತ್ಯ ವಸ್ತು, ಸೇವೆಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲಿದೆ. ಈ ಮೂಲಕ ಏ.13ರವರೆಗೆ ವಿವಿಧ ಹಂತಗಳಲ್ಲಿ ಈ ಕುರಿತು ನಡೆಸುವ ಹೋರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಈ ಧರಣಿ ಆರಂಭವಾಗಲಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತಿತರರು
ಪಾಲ್ಗೊಳ್ಳಲಿದ್ದಾರೆ.

ಧರಣಿಯಲ್ಲಿ ಪಾಲ್ಗೊಳ್ಳುತ್ತೇನೆ : BSY

ರಾಜ್ಯ ಸರ್ಕಾರ ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ಬುಧವಾರ ಅಹೋರಾತ್ರಿ ಧರಣಿ ನಡೆಸಲಿದ್ದು, ನಾನೂ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ತಿಂಗಳು ಒಂದಲ್ಲ ಒಂದು ರೀತಿ ಬೆಲೆ ಹೆಚ್ಚಿಸುತ್ತಿದ್ದಾರೆ. ಪೆಟ್ರೋಲ್, ಬಸ್ ಪ್ರಯಾಣ ದರ ಹೆಚ್ಚಿಸಿದ್ದಾರೆ. ಸಾಮಾನ್ಯ ಜನ ಬಳಸುವ ಹಾಲಿನ ದರವನ್ನು ಇನ್ನೆಂದೂ ಇಲ್ಲದ ರೀತಿಯಲ್ಲಿ ಒಂದೇ ಬಾರಿಗೆ ಒಂದು ಲೀಟರ್‌ಗೆ 4 ರು. ಹೆಚ್ಚಿಸಿದ್ದಾರೆ. ಒಟ್ಟಾರೆ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರ್‌ಗೆ 9 ರು. ಹೆಚ್ಚಿಸಿದ್ದಾರೆ.

ವಿದ್ಯುತ್ ದರವನ್ನು ಪ್ರತಿ ಯುನಿಟ್‌ಗೆ 36 ಪೈಸೆ ಹೆಚ್ಚಿಸಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನ ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರುಗಟ್ಟುವ ಸ್ಥಿತಿ ಬಂದಿದೆ. ನೋವು ಅನುಭವಿಸುತ್ತಿರುವ ಎಲ್ಲರೂ ಪಕ್ಷಭೇದ ಮರೆತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಹಾಗೂ ಹೋರಾಟ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು.

ಮಾಧ್ಯಮ ಸ್ನೇಹಿತರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ ಎಂದು ಭಾವಿಸುತ್ತೇನೆ. ಇಂಥ ಸಂದರ್ಭದಲ್ಲಿ ಮಾಧ್ಯಮ ಸ್ನೇಹಿತರು ನಮ್ಮ ಹೋರಾಟದಲ್ಲಿ ಗಟ್ಟಿಯಾಗಿ ನಿಂತಾಗ ಈ ಸರಕಾರ ಒಂದು ಹೆಜ್ಜೆ ಹಿಂದಿಡಬಹುದು ಎಂಬ ನಂಬಿಕೆ ಇದೆ ಎಂದು ತಿಳಿಸಿದರು. ಯತ್ನಾಳ್ ಅವರ ಉಚ್ಚಾಟನೆ ವಿಚಾರವಾಗಿ ಯಾವುದೇ ಮಾತನಾಡುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಅಜೀರ್ಣ ಆಗುವಷ್ಟು ಬಹುಮತವನ್ನು ಜನರು ಕಾಂಗ್ರೆಸ್ ಸರಕಾರಕ್ಕೆ ಕೊಟ್ಟಾಗ ಒಂದು ರೀತಿ ತುಘಲಕ್ ದರ್ಬಾರ್ ನಡೆಸಿ, ಜನಹಿತವನ್ನು ಮರೆತು, ಸಾಮಾನ್ಯ ಜನರು ಬದುಕಲಾಗದಷ್ಟು, ಉಸಿರು ಕಟ್ಟುವ ಪರಿಸ್ಥಿತಿಯನ್ನು ತಂದದ್ದು ಸಿದ್ದರಾಮಯ್ಯ ಸರಕಾರದ ಸಾಧನೆ ಎಂದು ಅವರು ಟೀಕಿಸಿದರು.

Share. Facebook Twitter LinkedIn WhatsApp Email

Related Posts

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

2 Mins Read

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

2 Mins Read
Recent News

ಪ್ರಧಾನಿ ಮೋದಿಗೆ ಸ್ವೀಡನ್‌ನ ಅತ್ಯುನ್ನತ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್’ ಗೌರವ; ಇದು 31ನೇ ಜಾಗತಿಕ ಪ್ರಶಸ್ತಿ!

GOOD NEWS : ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಭಾರತದಲ್ಲಿ ಮೊದಲ ಬಾರಿಗೆ 7 ನಿಮಿಷಗಳಲ್ಲಿ `ಕ್ಯಾನ್ಸರ್’ ಗುಣಪಡಿಸುವ ಇಂಜೆಕ್ಷನ್ ಬಿಡುಗಡೆ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ: ಭಾರತದಲ್ಲಿ ಬಿಡುಗಡೆಯಾಯಿತು ಕೇವಲ ‘7 ನಿಮಿಷದ’ ಇಂಜೆಕ್ಷನ್ !

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

State News
KARNATAKA

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

By kannadanewsnow57 KARNATAKA 2 Mins Read

ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಂದು ಅಭೂತಪೂರ್ವ ಮೈಲಿಗಲ್ಲು ನೆಟ್ಟಿದ್ದಾರೆ. ಮುಖ್ಯಮಂತ್ರಿ ಹುದ್ದೆಯಲ್ಲಿ ಸುದೀರ್ಘ 8…

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಪಿಯು ಕಾಲೇಜುಗಳಲ್ಲಿ ಈ ವರ್ಷದಿಂದಲೇ ‘ಘಟಕ ಆಧಾರಿತ ಮೌಲ್ಯಮಾಪನ’ (LBA) ಜಾರಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Lesson Based Assessment

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.