ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.
ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ ಬಿಜೆಪಿ ಅನಾಯಾಸವಾಗಿ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಗೆಲುವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸದ ಪ್ರತೀಕವಾಗಿದೆ, ಮುಂಬರಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಮೋದಿಯವರ ಮ್ಯಾಜಿಕ್ ನಡೆಯಲಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದರು.