ಬೆಂಗಳೂರು : 2028 ರ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟ್ ಸಹ ಬರುವುದಿಲ್ಲ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ. ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಯಾವುದು ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು.
ಕಾಂಗ್ರೆಸ್ ನಲ್ಲಿ ಸಾಲು ಸಾಲು ಡಿನ್ನರ್ ಮೀಟಿಂಗ್ ವಿಚಾರವಾಗಿ ಊಟಕ್ಕೆ ಆಹ್ವಾನ ಮಾಡುತ್ತಾರೆ ಹಾಗಾಗಿ ಎಲ್ಲ ನಾಯಕರು ಹೋಗುತ್ತಾರೆ. ಪಾರ್ಟಿ ಔತಣಕೂಟ ಏನು ಇಲ್ಲ ನನ್ನನ್ನು ಸಹ ಯಾರು ಕರೆದಿಲ್ಲ. 2028 ರ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟ್ ಸಹ ಬರುವುದಿಲ್ಲ. ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಯಾವುದು ಇಲ್ಲ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು.
60 ಪರ್ಸೆಂಟ್ ಅಂತ ಹೆಚ್ ಡಿ ಕುಮಾರಸ್ವಾಮಿ ಹತಾಶರಾಗಿ ಮಾತನಾಡುತ್ತಿದ್ದಾರೆ. ಹಿಂದೆ ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಅಂತ ಆರೋಪ ಮಾಡಿದ್ದರು. ಕುಮಾರಸ್ವಾಮಿ ಕನಸು ಕಾಣುವುದನ್ನು ಬಿಡಬೇಕು. 32 ಸಾವಿರ ಕೋಟಿ ರೂಪಾಯಿ ಗುತ್ತಿಗೆದಾರರ ಬಾಕಿ ಬಿಲ್ ವಿಚಾರವಾಗಿ ಬಿಜೆಪಿಯವರೇ ಎಲ್ಲವನ್ನೂ ಬಿಟ್ಟು ಹೋಗಿದ್ದಾರೆ. ಎಂದು ಸಚಿವ ರಾಮಲಿಂಗ ರೆಡ್ಡಿ ಬಿಜೆಪಿ ವಿರುದ್ಧ ಆರೋಪಿಸಿದರು.