ಚಿತ್ರದುರ್ಗ : ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಇತರೆ ನಾಯಕರ ಸಮ್ಮುಖದಲ್ಲಿ ಸಮನ್ವಯ ಸಭೆಯ ನಡೆಯಿತು. ಸಭೆಯ ಬಳಿಕ ನೋಡು ನೋಡುತ್ತಿದ್ದಂತೆ ಗಲಾಟೆ ನಡೆದು ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.
ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಮನ್ವಯ ಸಭೆ ನಡೆಯಿತು ಸಭೆಯ ಬಳಿಕ ಅಭ್ಯರ್ಥಿ ಗೋವಿಂದ ಕಾರಜೋಳ್ ಅವರು ತೆರಳಿದಾಗ ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೌಷ್ಟಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದೆ.
ಈ ವೇಳೆ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಎನ್ನುವವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪ ಕೇಳಿ ಬಂದಿದೆ. ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಪೋಸ್ಟ್ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ತಕ್ಷಣ ಅಲ್ಲಿಯೇ ಇದ್ದ ಇತರೆ ಕಾರ್ಯಕರ್ತರು ಗಲಾಟೆಯನ್ನು ನಿಯಂತ್ರಿಸಿದ್ದಾರೆ ಎಂದು ತಿಳಿದುಬಂದಿದೆ.