ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ, ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಿದ್ದು, ನಿನ್ನೆ ಮೈಸೂರಲ್ಲಿ ಈ ಒಂದು ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದರು. ಇದೀಗ ಈ ಒಂದು ಜನಾಕ್ರೋಶ ಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮಂಡ್ಯದಲ್ಲಿ ಯಾತ್ರೆ ಆರಂಭವಾಗಲಿದೆ.
ಹೌದು ಕಾಂಗ್ರೆಸ್ ಸರ್ಕಾರದ ವಿರುದ್ಧ ಎರಡನೇ ದಿನದ ಜನಕ್ರೋಶ ಯಾತ್ರೆ ಇಂದು ಆರಂಭವಾಗಲಿದೆ. ಇಂದು ಮಂಡ್ಯದಲ್ಲಿ ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಿ, ಸಿಲ್ವರ್ ಜೂಬ್ಲಿ ಪಾರ್ಕ್ ವರೆಗೆ ಈ ಒಂದು ಜನಾಕ್ರೋಶ ಯಾತ್ರೆ ಸಾಗಲಿದೆ.
ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಪಕ್ಷ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಜನಾಕ್ರೋಶ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಸಹ ಇಂದು ಮಂಡ್ಯದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.