ತುಮಕೂರು : ತುಮಕೂರು ಜನತೆಗೆ ಸಿಹಿ ಸುದ್ದಿಯೊಂದ್ ಇದ್ದು ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿಎಂಆರ್‌ಸಿಎಲ್ ಈಗಾಗಲೇ ಟೆಂಡರ್ ಕರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತಾಗಿ ರಾಜ್ಯ ಸರಕಾರ ಸಾಧಕ-ಬಾಧಕಗಳ ಚರ್ಚೆ ಮಾಡಿದೆ. ನಂತರ ಡಿಪಿಆರ್ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕೈದು ತಿಂಗಳಲ್ಲಿ ಡಿಪಿಆರ್ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸ್ಫೋಟ ಕುರಿತು ಮಾಧ್ಯಮದವರ ಪ್ರಶ್ನೆಗೆ, ಕೇಂದ್ರದಲ್ಲಿ ವಿವಿಧ ಏಜೆನ್ಸಿಗಳಿವೆ. ಇವೆಲ್ಲವೂ ಒಟ್ಟಿಗೆ ಸೇರಿ ಕೆಲಸ ಮಾಡುತ್ತವೆ. ಅನುಮಾನದ ಮೇಲೆ ಆರೋಪಿಗಳನ್ನು ಹಿಡಿದುಕೊಂಡು ಬರುತ್ತಾರೆ. ಸಾಕ್ಷಿ ಸಿಗದಿದ್ದರೆ ಬಿಟ್ಟು ಕಳುಹಿಸುತ್ತಾರೆ ಎಂದು ಉತ್ತರಿಸಿದರು








