ಬೆಂಗಳೂರು : ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ. ಬಡತನ ರೇಖೆಗಿಂತ ಮೇಲೆ ಇದ್ದವರು ಹಾಗೂ ಬಿಪಿಎಲ್ ಕಾರ್ಡ್ ಗಳಿಗೆ ಅರ್ಹರಲ್ಲದವರನ್ನು ಗುರುತಿಸಿ ಅಂತವರ ಕಾರ್ಡ್ ಗಳನ್ನು ಎಪಿಎಲ್ ಗೆ ಬದಲಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದರು.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಭಯಪಡಬೇಕಿಲ್ಲ. ಬಿಜೆಪಿಯವರು ಸುಮ್ಮನೆ ತರಲೆ ಮಾಡುತ್ತಿದ್ದಾರೆ. ಬಡವರಿಗೆ ಅಕ್ಕಿ ಕೊಡುತ್ತಿರುವುದರಿಂದ ಇವರಿಗೆ ಸಮಾಧಾನ ಇಲ್ಲ. 20 ರಿಂದ 25 ರಷ್ಟು ಅರ್ಹರಲ್ಲದವರು ಸೇರಿಕೊಂಡಿದ್ದಾರೆ. ಬಡವರು ಅಲ್ಲದವರು ಹಾಗೂ ಅರ್ಹರಲ್ಲದವರು ಸೇರಿಕೊಂಡಿದ್ದಾರೆ.
ರಾಜ್ಯದಲ್ಲಿ ಬಡವರ ಪ್ರಮಾಣ ಶೇಕಡ 80ರಷ್ಟಿದೆ ಇದು ಸಾಧ್ಯವಾ? ಕರ್ನಾಟಕದ ಅಂತಹ ರಾಜ್ಯದಲ್ಲಿ ಶೇಕಡಾ 80ರಷ್ಟು ಬಡವರಿದ್ದಾರಾ? ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಇದಕ್ಕೆ ರಾಜಕೀಯ ಬೆರೇಸಿ ದೊಡ್ಡ ಗದ್ದಲ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಯಾರು ಕೆಳಗಿದ್ದಾರೋ ಬಡತನ ರೇಖೆಗಿಂತ ಯಾರು ಮೇಲಿದ್ದಾರೋ ಎನ್ನುವುದು ಸತ್ಯ ಹೊರತರುತ್ತೇವೆ ಎಂದು ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.