Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

’70-80% ರಾಜಕಾರಣಿಗಳು ಅಶ್ಲೀಲ ಸಿನಿಮಾ ನೋಡ್ತಾರೆ’: ಪಪ್ಪು ಯಾದವ್ ಹೊಸ ಬಾಂಬ್; ದೇಶಾದ್ಯಂತ ಭಾರಿ ಆಕ್ರೋಶ!

22/04/2026 6:41 PM

ವಿಶ್ವದ ಟಾಪ್ 20 ಬಿಸಿ ನಗರಗಳು: ಭಾರತದ 19 ನಗರಗಳಿಗೆ ಅಗ್ರಸ್ಥಾನ! ನಿಮ್ಮ ನಗರವೂ ಈ ಪಟ್ಟಿಯಲ್ಲಿದೆಯೇ?

22/04/2026 6:35 PM

ಪಹಲ್ಗಾಮ್ ಭೀಕರ ದಾಳಿಗೆ ಒಂದು ವರ್ಷ: ಪಾಕಿಸ್ತಾನದ ವಿರುದ್ಧ ಮತ್ತೆ ಮೊಳಗಿದ ಜಾಗತಿಕ ಆಕ್ರೋಶ!

22/04/2026 6:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ
KARNATAKA

BIG NEWS : ಇಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ

By kannadanewsnow5713/11/2024 6:13 AM

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ, ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಜರುಗಲಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.

ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ ಗಾಗಿ ನಿಯೋಜಿತಗೊಂಡಿರುವ ಪೋಲಿಸರು, ಗೃಹರಕ್ಷಕ ದಳದವರು ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಆಯಾ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ ಕರೆದುಕೊಂಡು ಹೋಗಲು ಬಸ್, ಕ್ರೂಸರ್ ಹಾಗೂ ಜೀಪ್‌ಗಳು ಕಾಲೇಜು ಮುಂಭಾಗದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು.

ಮಸ್ಟರಿಂಗ್ ಕಾರ್ಯಕ್ಕೆ ಆಗಮಿಸಿದ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾದಲ್ಲಿ, ತ್ವರಿತ ಸ್ಪಂದನೆಗಾಗಿ, ವೈದ್ಯರಿಂದ ಆರೋಗ್ಯ ತಪಾಸಣೆ, ಅಗತ್ಯ ಔಷÀಧಿಗಳು, ಓಆರ್‌ಎಸ್, ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು.
ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟ ಪೂರೈಸಿಕೊಂಡು ಹೋಗುವ ರೀತಿ ವ್ಯವಸ್ಥೆ ಮಾಡಲಾಗಿತ್ತು.

ಮೂರು ಕ್ಷೇತ್ರಗಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ, ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಲಾಗಿದೆ.

BIG NEWS : ಇಂದು ಚನ್ನಪಟ್ಟಣ BIG NEWS: BY-ELECTIONS TO CHANNAPATNA SANDUR ASSEMBLY CONSTITUENCIES: 7 AM TO 6 PM SHIGGAVI ಶಿಗ್ಗಾವಿ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಹೈಟೆಕ್ ಸಬ್ ರಿಜಿಸ್ಟ್ರಾರ್ ಕಚೇರಿ’ ನಿರ್ಮಾಣ: ಶಾಸಕ ಗೋಪಾಲಕೃಷ್ಣ ಬೇಳೂರು

22/04/2026 6:20 PM2 Mins Read

BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ

22/04/2026 6:05 PM1 Min Read

ಸಾಗರದಲ್ಲಿ ‘ಲಯನ್ಸ್ ಕ್ಲಬ್’ನಿಂದ ವಿಶೇಷ ಚೇತನರಿಗೆ ₹3 ಕೋಟಿ ವೆಚ್ಚದ ಸಾಧನಾ ಸಲಕರಣೆ ವಿತರಣೆ; ಅಧ್ಯಕ್ಷ ಡಾ.ಪ್ರಸನ್ನ.ಟಿ

22/04/2026 5:59 PM2 Mins Read
Recent News

’70-80% ರಾಜಕಾರಣಿಗಳು ಅಶ್ಲೀಲ ಸಿನಿಮಾ ನೋಡ್ತಾರೆ’: ಪಪ್ಪು ಯಾದವ್ ಹೊಸ ಬಾಂಬ್; ದೇಶಾದ್ಯಂತ ಭಾರಿ ಆಕ್ರೋಶ!

22/04/2026 6:41 PM

ವಿಶ್ವದ ಟಾಪ್ 20 ಬಿಸಿ ನಗರಗಳು: ಭಾರತದ 19 ನಗರಗಳಿಗೆ ಅಗ್ರಸ್ಥಾನ! ನಿಮ್ಮ ನಗರವೂ ಈ ಪಟ್ಟಿಯಲ್ಲಿದೆಯೇ?

22/04/2026 6:35 PM

ಪಹಲ್ಗಾಮ್ ಭೀಕರ ದಾಳಿಗೆ ಒಂದು ವರ್ಷ: ಪಾಕಿಸ್ತಾನದ ವಿರುದ್ಧ ಮತ್ತೆ ಮೊಳಗಿದ ಜಾಗತಿಕ ಆಕ್ರೋಶ!

22/04/2026 6:30 PM

BREAKING: ಚುನಾವಣಾ ಆಯೋಗದ ಭರ್ಜರಿ ಬೇಟೆ: ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ 1,000 ಕೋಟಿ ಮೌಲ್ಯದ ನಗದು, ಉಡುಗೊರೆ ಜಪ್ತಿ!

22/04/2026 6:29 PM
State News
KARNATAKA

ಸಾಗರದಲ್ಲಿ ‘ಹೈಟೆಕ್ ಸಬ್ ರಿಜಿಸ್ಟ್ರಾರ್ ಕಚೇರಿ’ ನಿರ್ಮಾಣ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0922/04/2026 6:20 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಯನ್ನು ಸುಸಜ್ಜಿತವಾಗಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರು ಮಾಡಿಸಲಾಗುವುದು.…

BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ

22/04/2026 6:05 PM

ಸಾಗರದಲ್ಲಿ ‘ಲಯನ್ಸ್ ಕ್ಲಬ್’ನಿಂದ ವಿಶೇಷ ಚೇತನರಿಗೆ ₹3 ಕೋಟಿ ವೆಚ್ಚದ ಸಾಧನಾ ಸಲಕರಣೆ ವಿತರಣೆ; ಅಧ್ಯಕ್ಷ ಡಾ.ಪ್ರಸನ್ನ.ಟಿ

22/04/2026 5:59 PM

ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲದಿದ್ದರೆ ಜನರ ಸಂಕಷ್ಟಕ್ಕೆ ಕೊನೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ

22/04/2026 5:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.