Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362 ಕೋಟಿ ರೂ ಸಾಲ ವಿತರಣೆ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362 ಕೋಟಿ ರೂ ಸಾಲ ವಿತರಣೆ : ಸಿಎಂ ಸಿದ್ದರಾಮಯ್ಯ

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362.68 ಕೋಟಿ ರೂ ಸಾಲ ವಿತರಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಈ ವೇಳೆ, ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು. ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ 5,600 ಕೋಟಿಗಳಿಂದ 3,236.11 ಕೋಟಿ ರೂಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ.

2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ರೂ ಕೃಷಿ ಸಾಲ ವಿತರಣೆ ಮಾಡಲಾಗಿದೆ. ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 7074 ಗಿರವಿದಾರ ಸಂಸ್ಥೆಗಳು ಹಾಗೂ 1468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು. ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.