ದಕ್ಷಿಣಕನ್ನಡ : ಮಂಗಳೂರಿನಲ್ಲಿ ನಿನ್ನೆ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿಯನ್ನು ಲಾಂಗು, ಮಚ್ಚುಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈಗ ಮೃತ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಭೇಟಿ ನೀಡಿ ಉತ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಇದೇ ವೇಳೆ ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಬಿವೈ ವಿಜಯೇಂದ್ರ ಘೋಷಿಸಿದರು.
ಸುಹಾಸ್ ಶೆಟ್ಟಿ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ಮೇಲ್ನೋಟಕ್ಕೆ ಪೊಲೀಸ್ ಇಲಾಖೆಯ ವೈಫಲ್ಯ ಕಂಡುಬರುತ್ತದೆ. ಸುಹಾಸ ಶೆಟ್ಟಿ ಹತ್ಯೆ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೆ ಗ್ರಾಮದಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು.
ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜೀವಕ್ಕೆ ರಕ್ಷಣೆ ನೀಡದಿರುವುದು ಪೊಲೀಸರ ವೈಫಲ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಮುಖಂಡರು ಕಾರ್ಯಕರ್ತರು ಸುಹಾಸ್ ಕುಟುಂಬದ ಜೊತೆಗೆ ಇದ್ದೇವೆ. ಪಕ್ಷದ ಪರವಾಗಿ 25 ಲಕ್ಷ ಪರಿಹಾರ ನೀಡಲು ತೀರ್ಮಾನಿಸಿದ್ದೇವೆ ಎಂದರು
ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಜಿ.ಪರಮೇಶ್ವರ್ ಘಟನೆಯ ಗಂಭೀರತೆ ಅರ್ಥಮಾಡಿಕೊಳ್ಳಬೇಕು. ಸರ್ಕಾರಕ್ಕೆ ಮನುಷತ್ವ ಇದ್ದರೆ ಕುಟುಂಬಕ್ಕೆ ಪರಿಹಾರ ನೀಡಬೇಕು. ಕೊಲೆಯಾದ ಸುಹಾಸ ಶೆಟ್ಟಿ ಕುಟುಂಬಕ್ಕೆ ಪರಿಹಾರ ನೀಡಬೇಕು. ಸುಹಾಸ ಶೆಟ್ಟಿ ಕೊಲೆ NIA ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.